ಮತ್ತೊಮ್ಮೆ ಲಾಕ್‌ಡೌನ್ ಜಾರಿ ಮಾಡುವುದಿಲ್ಲ

Lock down

ಮತ್ತೊಮ್ಮೆ ಲಾಕ್‌ಡೌನ್ ಜಾರಿ ಮಾಡುವುದಿಲ್ಲ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ನಗರದ ಇಂದು ಚಾಮರಾಜಪೇಟೆಯ ಶಂಕರಮಠದಲ್ಲಿ ಕೊರೋನಾ ಮಣಿಸಲು ಧನ್ವಂತರಿ ಯಾಗದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ ಜನತೆ ಸಹಜ ಜೀವನ ನಡೆಸಬೇಕಾದ ಅಗತ್ಯವಿದೆ. ಈಗಾಗಲೇ ಲಾಕ್‌ರ್ಡನ್‌ನಿಂದ ಹಲವು ಪರಿಣಾಮಗಳು ಎದುರಾಗಿವೆ. ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮತ್ತೊಮ್ಮೆ ಹೇಳಿದರು.  ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡು ರಾಜ್ಯದಲ್ಲಿ ಇನ್ನಷ್ಟು ವಿನಾಯಿತಿ ನೀಡಬೇಕೆಂದು ಹಾಗೂ ಇದಕ್ಕೆ ಸಂಬಂಧಪಟ್ಟ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತ್ತು ಬೇರೆ ರಾಜ್ಯಗಳಿಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಕೊರೋನಾ ಸಾಕಷ್ಟು ಹತೋಟಿಯಲ್ಲಿದೆ ಅನ್ಯ ರಾಜ್ಯದಿಂದ ಆಗಮಿಸಿದ್ದವರ ಪರಿಣಾಮ ರಾಜ್ಯದಲ್ಲಿ ಸೋಂಕಿತರಲ್ಲಿ ಏರಿಕೆ ಕಂಡಿದೆ ವಿನಃ ಬೇರೆಯಿಂದಲ್ಲ ಎಂದು ಹೇಳಿದರು. ಈಗಾಗಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ನಾಡಿನ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ನಡೆಸ ಬೇಕಾದ ಅವಶ್ಯಕತೆಯಿದೆ. ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ರೀತಿಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಇದೇ ವೇಳೆ ಮನವಿ ಮಾಡಿದರು.