ಸದ್ಯಕ್ಕೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ..

ಸದ್ಯಕ್ಕೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ..
ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ..

ಅಥಣಿ:ಮಹೇಶ್ ಕುಮಟಳ್ಳಿಗೆ ಸಚಿವ ಸಂಪುಟದಲ್ಲಿ ಸದ್ಯಕ್ಕೆ ಸ್ಥಾನ ಇಲ್ಲ. ಸದ್ಯ ಅಥಣಿ ನಿರಾವರಿ ಕಾಮಗಾರಿಗಳ ಪರಿಶೀಲನೆಗೆ ಸಂಬAಧಿಸಿದAತೆ ಭೇಟಿ ನೀಡಿದ್ದೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಅವರು ತಾಲೂಕಿನಲ್ಲಿ ವಿವಿಧ ನೀರಾವರಿ ಯೋಜನೆಗಳ ಕಾಮಗಾರಿ ಪರಿಶೀಲನೆ ವೇಳೆ ಮಾತನಾಡಿ, ಎರಡು ದಿನಗಳ ಪ್ರವಾಸ ಕೈಗೊಂಡಿದ್ದೇನೆ.ಕಮರಿ ಕೊಟ್ಟಲಗಿ ನೀರಾವರಿ ಯೋಜನೆಯನ್ನು ಆದಷ್ಟು ಬೇಗ ರೂಪಿಸಲಾಗುವುದು. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ಸರ್ಕಾರ ಜೊತೆ ಮಾತುಕತೆ ನಡೆದಿದೆ. ಅಥಣಿ ತಾಲೂಕಿನ ನೀರಾವರಿ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಲಾಗುವುದು ಎಂದರು.
ಜಮಖAಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಎಂಎಲ್‌ಸಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಎಂಎಲ್‌ಸಿ ವಿಚಾರಕ್ಕೆ ಸಂಬAಧಿಸಿದAತೆ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.