ಪ್ರತಿಭಟನೆ ನೆಪದಲ್ಲಿ ಸಾಮಾಜಿಕ ಅಂತರ ಮರೆತ ಕಾಂಗ್ರೆಸ್... ಕೊರೊನಾ ನಿಯಮ ಹರೋಹರ!

ಪ್ರತಿಭಟನೆ ನೆಪದಲ್ಲಿ ಸಾಮಾಜಿಕ ಅಂತರ ಮರೆತ ಕಾಂಗ್ರೆಸ್...  ಕೊರೊನಾ ನಿಯಮ ಹರೋಹರ!
ಸಾಮಾಜಿಕ ಅಂತರ ಮರೆತ ಕಾಂಗ್ರೆಸ್..
ಪ್ರತಿಭಟನೆ ನೆಪದಲ್ಲಿ ಸಾಮಾಜಿಕ ಅಂತರ ಮರೆತ ಕಾಂಗ್ರೆಸ್...  ಕೊರೊನಾ ನಿಯಮ ಹರೋಹರ!

ಬೆಂಗಳೂರು: ಕೇಂದ್ರ ಸರ್ಕಾರದಿಂದ ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆದಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರು ಸಾಮಾಜಿಕ ಅಂತರ ಮರೆತಿರುವುದು ಕಂಡುಬ0ದಿದೆ.
ಬೆAಗಳೂರಿನ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿರುವ ಕಾರ್ಯಕರ್ತರು ಎಲ್ಲಿಯೂ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದು ಕಾಣಿಸುತ್ತಿಲ್ಲ. ಕೆಪಿಸಿಸಿ ಕಚೇರಿಯಿಂದ ವಿವಿಧ ರಾಜ್ಯ ನಾಯಕರ ಜೊತೆ ಸೈಕಲ್ ಮೂಲಕ ಮೆರವಣಿಗೆ ತೆರಳಿ ಇಂಡಿಯನ್ ಎಕ್ಸ್ಪ್ರೆಸ್ ಬಳಿ ಇರುವ ಆದಾಯ ತೆರಿಗೆ ಇಲಾಖೆ ಕಚೇರಿವರೆಗೂ ತೆರಳಿ ಅಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ತೀರ್ಮಾನಿಸಿದ್ದರು.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಮುಂಭಾಗ ಜಮಾಯಿಸಿರುವ ನೂರಾರು ಕಾರ್ಯಕರ್ತರು ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಓಡಾಡುತ್ತಿದ್ದಲ್ಲದೆ, ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದರು.
ಅಲ್ಲದೆ,ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗಮಿಸಿದ ಸಂದರ್ಭ ಕಾರ್ಯಕರ್ತರ ನೂಕುನುಗ್ಗಲು ಇನ್ನಷ್ಟು ಹೆಚ್ಚಾಗಿರುವುದು ಕಂಡು ಬಂತು.