ಮೇ.3ರ ಬಳಿಕ ಲಾಕ್‌ಡೌನ್ ನಿರ್ಧಾರ..

ಮೇ.3ರ ಬಳಿಕ ಲಾಕ್‌ಡೌನ್ ನಿರ್ಧಾರ..
ವಿಡಿಯೋ ಸಂವಾದದಲ್ಲಿ ಸಿಎಂ ಯಡಿಯೂರಪ್ಪ

ಬೆಂಗಳೂರು” ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ.೧೫ರವರೆಗೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರ ಬಳಿ ಮನವಿ ಮಾಡಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ನಡೆದ ವಿಡಿಯೋ ಸಂವಾದದಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದಲ್ಲೇ ಮೇ.೩ರ ಬಳಿಕ ಮತ್ತೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ.ಮೇ.೧೫ರವರೆಗೆ ಲಾಕ್ ಡೌನ್ ವಿಸ್ತರಿಸಿದರೆ ಒಳಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಈ ಬಗ್ಗೆ ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ. ಬದಲಿಗೆ ಮೇ.೩ರ ನಂತರ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಪ್ರಧಾನಿ ಸುಳಿವು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಸದ್ಯದ ಆರ್ಥಿಕ ಪರಿಸ್ಥಿತಿ ನಿಟ್ಟಿನಲ್ಲಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಿಗೆ ಕೆಲವೊಂದು ವಿನಾಯಿತಿ ನೀಡುವಂತೆ ಪ್ರಧಾನಿ ಬಳಿ ಮನವಿ ಮಾಡಲಾಗಿದೆ.ಇದೇ ವೇಳೆ, ಸದ್ಯಕ್ಕೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂತಲೂ ಸ್ಪಷ್ಟಪಡಿಸಲಾಗಿದೆ..